Constitution Day : ನ. 26ರಂದು ಎಲ್ಲಾ ಶಾಲೆಗಳಲ್ಲಿ ಸಂವಿಧಾನ ದಿನಾಚರಣೆಗೆ ಆದೇಶ
ನವೆಂಬರ್ 26ರಂದು ಶಾಲೆಗಳಲ್ಲಿ ಸಂವಿಧಾನ ದಿನಾಚರಣೆಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ನವೆಂಬರ್ 26ರಂದು ‘ಸಂವಿಧಾನ ದಿನ’ ಆಚರಿಸುವಂತೆ ಸುತ್ತೋಲೆ ಹೊರಡಿಸಿದೆ.
ಭಾರತದ ಸಂವಿಧಾನ ಸಭೆಯು 26 ನವೆಂಬರ್ 1949ರಂದು ತನ್ನ ಸಂವಿಧಾನವನ್ನು ಅಂಗೀಕರಿಸಿತ್ತು. ಆದರೆ ಅದನ್ನು 26 ಜನವರಿ 1950 ರಂದು ಜಾರಿಗೆ ತರಲಾಯಿತು. ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ನೆನಪಿಸಲು ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ.
ಎಲ್ಲಾ ಶಾಲೆಗಳಿಗೆ ನವೆಂಬರ್ 29ರಂದು ಭಾರತ ಸಂವಿಧಾನ ಅಂಗೀಕಾರವಾದ ನೆನಪಾರ್ಥ, ಅಂದು ಬೆಳಿಗ್ಗೆ 11 ಗಂಟೆಗೆ ಸಂವಿಧಾನದ ಪೀಠಿಕೆ ಓದಿಸುವುದು, ಸಂವಿಧಾನಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಶಿಕ್ಷಣ ಇಲಾಖೆಯು ನಿರ್ದೇಶನ ನೀಡಿದೆ.
Constitution Day: Order to celebrate Constitution Day in all schools on Nov 26th