ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ರಾತ್ರೋರಾತ್ರಿ ಕುವೆಂಪು ಹಾಗೂ ಅಪ್ಪು ಪ್ರತಿಮೆ ನಿರ್ಮಾಣವಾಗಿದ್ದು, ಜನರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಹಿರಿಯೂರು ನಗರದ ಇಂದಿರಾ ಕ್ಯಾಂಟೀನ್ ಬಳಿ ಇರುವ ನೂತನ ಬಿಇಓ ಕಚೇರಿ ಮುಂಭಾಗದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಮತ್ತೊಂದೆಡೆ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ ನಿರ್ಮಾಣ ಮಾಡಲಾಗಿದೆ.
ಪ್ರತಿಮೆಗಳಿಗೆ ಕೆಂಪು ಹಾಗೂ ಹಳದಿ ಬಣ್ಣದ ಬಟ್ಟೆ ಸುತ್ತಲಾಗಿದ್ದು, ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ. ಪ್ರತಿಮೆಗಳ ಕೆಳ ಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಎಂದು ಬರೆಯಲಾಗಿದ್ದು, ಹೀಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಈ ಪ್ರತಿಮೆ ಸ್ಥಾಪನೆ ಮಾಡಲಾಗಿದೆ ಎನ್ನಲಾಗುತ್ತಿದೆ.
ರಂಜಿತಾ ಹೋಟೆಲ್ ಮುಂಭಾಗದಲ್ಲಿ ರಾಷ್ಟ್ರಕವಿ ಕುವೆಂಪು ಪ್ರತಿಮೆ ಸ್ಥಾಪಿಸಲಾಗಿದೆ. ಎರಡು ಪ್ರತಿಮೆಗಳನ್ನು ಕರವೇ ಕಾರ್ಯಕರ್ತರು ಪ್ರತಿಷ್ಟಾಪಿಸಿದ್ದಾರೆ ಎಂದು ತಿಳಿದು ಬಂದಿದೆ.