ADVERTISEMENT
Wednesday, June 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೌನ್‌ ಶಿಪ್‌ ಗಳ ನಿರ್ಮಾಣಕ್ಕೆ ತಯಾರಿ ನಡೆಯುತ್ತಿದೆ : ಸಚಿವ ಜಗದೀಶ್ ಶೆಟ್ಟರ್

admin by admin
June 27, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವಾರು ನಗರಗಳು ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ಟೌನ್‌ಶಿಪ್‌ಗಳ ನಿರ್ಮಾಣ ಆಗಬೇಕೆನ್ನುವ ಬಹುದಿನಗಳ ಬೇಡಿಕೆಯಿದೆ. ಇದುವರೆಗೂ ಕೇವಲ ಚರ್ಚೆಯಲ್ಲಿ ಇದೆ. ಇದರ ಬಗ್ಗೆ ನಗರಾಭಿವೃದ್ದಿ ಸಚಿವರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಮನವರಿಕೆಯನ್ನು ಮಾಡಿಕೊಟ್ಟಿದ್ದೇವೆ. ಅಲ್ಲದೆ, ರಾಜ್ಯದಲ್ಲಿ ಆಗಬೇಕಾದ ಕೈಗಾರಿಕಾ ಟೌನ್‌ ಶಿಪ್‌ಗಳ ಬಗ್ಗೆ ವರದಿಯನ್ನು ತಯಾರಿಸುವಂತೆ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ. ಈ ಪ್ರಸ್ತಾಪಕ್ಕೆ ನಗರಾಭಿವೃದ್ದಿ ಇಲಾಖೆಯ ಒಪ್ಪಿಗೆ ಪಡೆದುಕೊಂಡು ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

ಬೆಂಗಳೂರು ನಗರದ ಕಾಸಿಯಾ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಎಮ್‌ಎಸ್‌ಎಂಇ ದಿನಾಚರಣೆಯ ಅಂಗವಾಗಿ ಕೋವಿಡ್‌ – 19 ಉದ್ಯೋಗ ಸಹಾಯವಾಣಿಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಹಾಗೂ ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಕೊರೊನಾ ಸಂಕಷ್ಟದಿಂದ ನಮ್ಮ ಆರ್ಥಿಕ ವ್ಯವಸ್ಥೆಗೆ ಚೇತರಿಕೆ ನೀಡುವ ಚೈತನ್ಯ ಈ ಸಂಸ್ಥೆಗಳಿಗೆ ಇದೆ. ಈ ಕ್ಷೇತ್ರಕ್ಕೆ ಕೇಂದ್ರ ಸರಕಾರದಿಂದಲೂ ಬಹಳಷ್ಟು ಪ್ರೋತ್ಸಾಹ ನೀಡಲಾಗುತ್ತಿದೆ .

Related posts

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

June 24, 2025
ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಎಮ್ಎಲ್ಸಿ

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಎಮ್ಎಲ್ಸಿ

June 24, 2025

ರಾಜ್ಯವನ್ನು ನಂ 1 ಕೈಗಾರಿಕಾ ಸ್ನೇಹೀ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರ ನೇತೃತ್ವದಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ರಾಜ್ಯವನ್ನು ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸಲು ಅಗತ್ಯವಿದ್ದ ಭೂಸುಧಾರಣೆ ಹಾಗೂ ಕೈಗಾರಿಕೆಗಳ ಸ್ಥಾಪನೆಗೆ ಅಡ್ಡಿಯಾಗಿದ್ದ ಹಲವಾರು ನಿಯಮಗಳನ್ನು ಸರಳೀಕರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದರು.

ಕಳೆದ ಸಚಿವ ಸಂಪುಟದಲ್ಲಿ ಈಗಾಗಲೇ 2002 ಕರ್ನಾಟಕ ಕೈಗಾರಿಕಾ ಸೌಲಭ್ಯ ಅಧಿನಿಯಮಕ್ಕೆ ತಿದ್ದುಪಡಿಯನ್ನು ತರಲು ಒಪ್ಪಿಗೆಯನ್ನು ಪಡೆಯಲಾಗಿದೆ. ಕೇವಲ ಕೈಗಾರಿಕಾ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿಯ ಆಧಾರದ ಮೇಲೆ ಕೈಗಾರಿಕೆಗಳ ಸ್ಥಾಪನೆಯ ಕಾರ್ಯವನ್ನು ಪ್ರಾರಂಭಿಸಲು ಈ ಅಧಿನಿಯಮ ಅವಕಾಶ ಒದಗಿಸಲಿದೆ. ಮೂರು ವರ್ಷಗಳು ಅಥವಾ ವಾಣಿಜ್ಯ ಉತ್ಪಾದನೆ ಪ್ರಾರಂಭವಾಗುವ ಮುನ್ನ ಬೇರೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಪಡೆಯಲು ಅವಕಾಶ ಇದರಲ್ಲಿ ದೊರೆಯಲಿದೆ. ಈ ತಿದ್ದುಪಡಿಯನ್ನು ಶೀಘ್ರದಲ್ಲೇ ಸುಗ್ರೀವಾಜ್ಞೇಯ ಮೂಲಕ ಜಾರಿಗೊಳಿಸಲಾಗುವುದು.

ರಾಜ್ಯದಲ್ಲಿ ಕೈಗಾರಿಕಾ ಟೌನ್‌ಶಿಪ್‌ ಗಳನ್ನು ನಿರ್ಮಾಣ ಮಾಡಬೇಕು ಎನ್ನುವುದು ಹಲವಾರು ವರ್ಷಗಳ ಬೇಡಿಕೆಯಾಗಿದೆ. ಅವಕಾಶವನ್ನು ನೀಡಿದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಾಡೆಲ್‌ ನ ಟೌನ್‌ ಶಿಪ್‌ ಗಳೂ ಬರಲಿವೆ ಎಂದು ನಗರಾಭಿವೃದ್ದಿ ಸಚಿವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ಹಿನ್ನಲೆಯಲಿ ಬೆಂಗಳೂರು ನಗರ ಹಾಗೂ ರಾಜ್ಯದ ಇತರೆ ಯಾವ ಭಾಗಗಳಲ್ಲಿ ಟೌನ್‌ ಶಿಪ್‌ ಗಳ ನಿರ್ಮಾಣ ಮಾಡಬೇಕು. ಹಾಗೂ, ಅದರ ಭೌಗೋಳಿಕ ಮ್ಯಾಪ್‌ ನ್ನ ಹೊಂದಿರುವಂತಹ ಒಂದು ಕಾಂಪ್ಯಾಕ್ಟ್‌ ಪ್ರಸ್ತಾವನೆಯನ್ನು ಸಿದ್ದಪಡಿಸುವಂತೆ ಸೂಚನೆ ನೀಡಿದ್ದೇನೆ. ಈ ಪ್ರಸ್ತಾವನೆಗೆ ನಗರಾಭಿವೃದ್ದಿ ಇಲಾಖೆಯ ಒಪ್ಪಿಗೆಯನ್ನು ಪಡೆದುಕೊಂಡು ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ತರಲಾಗುವುದು ಎಂದು ಸಚಿವರ ಭರವಸೆ ನೀಡಿದರು.

ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ಅಡಿಯಲ್ಲಿ ಹಂಚಿಕೆ ಮಾಡಲಾಗುವ ಭೂಮಿಯ ದರದ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸಲು ಹೊಸ ವೈಜ್ಞಾನಿಕ ನೀತಿಯನ್ನು ತರುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಅಲ್ಲದೆ, ನೂತನ ಕೈಗಾರಿಕಾ ನೀತಿ ಸಿದ್ದವಾಗಿದ್ದು, ಆರ್ಥಿಕ ಇಲಾಖೆಯ ಅನುಮತಿಗೆ ಕಾಯತ್ತಿದ್ದೇವೆ. ಈ ಕಾಯ್ದೆಯಲ್ಲಿ ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಸಿಯಾ ಅಧ್ಯಕ್ಷ ಆರ್‌ ರಾಜು, ಉಪಾಧ್ಯಕ್ಷರಾದ ಕೆ.ಬಿ. ಅರಸಪ್ಪ ಸೇರಿದಂತೆ ರಾಜ್ಯದ ಹಲವು ಭಾಗಗಳಿಂದ ಆಗಮಿಸಿದ್ದ ಸಂಘದ ಸದಸ್ಯರು ಭಾಗವಹಿಸಿದ್ದರು. ಇದೇ ವೇಳೆ, ಕರ್ನಾಟಕ ಕೌಶಲ್ಯ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಕೆ. ರತ್ನಪ್ರಭಾ ಅವರು ವೆಬ್‌ನೀಯರ್‌ ಮೂಲಕ ಪಾಲ್ಗೊಂಡಿದ್ದರು.

Tags: Jagdish Shettar
ShareTweetSendShare
Join us on:

Related Posts

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

by Shwetha
June 24, 2025
0

Haveri Zilla Panchayat Recruitment 2025 : ಜಿಲ್ಲಾ ಪಂಚಾಯತ್ ಕಾರ್ಯಾಲಯ ಹಾವೇರಿ ಇಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ...

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಎಮ್ಎಲ್ಸಿ

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಎಮ್ಎಲ್ಸಿ

by Shwetha
June 24, 2025
0

ಕರ್ನಾಟಕ ಸರ್ಕಾರದ ವಿರುದ್ಧ ಭಾರೀ ವಾಗ್ದಾಳಿ ನಡೆಸಿರುವ ಬಿಜೆಪಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ...

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತನಿಂದ ತನಿಖೆಗಾಗಿ ಮನವಿ

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತನಿಂದ ತನಿಖೆಗಾಗಿ ಮನವಿ

by Shwetha
June 24, 2025
0

ರಾಜ್ಯ ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಬಡವರಿಗೆ ಮನೆ ಹಂಚಿಕೆ ಮಾಡುವ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ. ಈ ಕುರಿತು ಸಾಮಾಜಿಕ...

ವಿಜಯೇಂದ್ರ ಮುಂದುವರಿದರೆ BJPಗೆ ವಾಪಸ್ಸು ಹೋಗುವ ಪ್ರಶ್ನೆಯೇ ಇಲ್ಲ – ಶಾಸಕ ಯತ್ನಾಳ್

ವಿಜಯೇಂದ್ರ ಮುಂದುವರಿದರೆ BJPಗೆ ವಾಪಸ್ಸು ಹೋಗುವ ಪ್ರಶ್ನೆಯೇ ಇಲ್ಲ – ಶಾಸಕ ಯತ್ನಾಳ್

by Shwetha
June 24, 2025
0

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ತಾವು BJPಗೆ ವಾಪಸ್ಸು ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅವರು ಈ ಹೇಳಿಕೆಯಿಂದ,...

ಮಲೆನಾಡಿನ ಮಜ್ಜಿಗೆ ಹುಳಿ ರೆಸಿಪಿ ಒಮ್ಮೆ Try ಮಾಡಿ

ಮಲೆನಾಡಿನ ಮಜ್ಜಿಗೆ ಹುಳಿ ರೆಸಿಪಿ ಒಮ್ಮೆ Try ಮಾಡಿ

by Shwetha
June 24, 2025
0

ಮಲೆನಾಡಿನ ಮಜ್ಜಿಗೆ ಹುಳಿ ಅತ್ಯಂತ ರುಚಿಕರವಾದ ಮತ್ತು ಆರೋಗ್ಯಕರವಾದ ಒಂದು ತಿನಿಸು. ಮಲೆನಾಡಿನ ಹಸಿರು ವಾತಾವರಣದಲ್ಲಿ ಬೆಳೆಯುವ ತರಕಾರಿಗಳು ಮತ್ತು ಸಾಂಬಾರ ಪದಾರ್ಥಗಳು ಈ ಮಜ್ಜಿಗೆ ಹುಳಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram