ಕಲುಷಿತ ನೀರು ಸೇವನೆ – 75ಕ್ಕೂ ಅಧಿಕ ಮಂದಿ ಅಸ್ಪತ್ರೆಗೆ ದಾಖಲು….

1 min read

ಕಲುಷಿತ ನೀರು ಸೇವನೆ –  75ಕ್ಕೂ ಅಧಿಕ ಮಂದಿ ಅಸ್ಪತ್ರೆಗೆ ದಾಖಲು….

ಕಲುಷಿತ ನೀರು ಸೇವಿಸಿ 75ಕ್ಕೂ ಅಧಿಕ ಮಂದಿ ಗ್ರಾಮಸ್ಥರು ಆಸ್ಪತ್ರೆ ಸೇರಿರುವ ಘಟನೆ  ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರಲ್ಲಿ ಕಾಣಿಸಿಕೊಂಡ ಏಕಾಏಕಿ ವಾಂತಿ ಭೇದಿಗೆ ಕಲುಷಿತ ನೀರು ಕಾರಣ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ವಾಂತಿ-ಭೇದಿಯಿಂದ ಬಳಲುತ್ತಿದ್ದ ಗ್ರಾಮಸ್ಥರ  ಪೈಕಿ ಓರ್ವನನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಚಿತ್ತಾಪುರ ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ.

ಜಿಮ್ಸ್‌ನಲ್ಲಿ ದಾಖಲಾಗಿರುವ ರೋಗಿಗಳನ್ನು ಲೋಕಸಭಾ ಸದಸ್ಯ ಉಮೇಶ ಜಾಧವ್​​ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಜತೆ ಚರ್ಚಿಸಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕೆಂದು ಸೂಚಿಸಿದರು.

ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರನ್ನು ಭೇಟಿ ಮಾಡಿದ ಸಂಸದರು ಗ್ರಾಮದಲ್ಲಿ ಕಲುಷಿತ ನೀರಿನ ಸಮಸ್ಯೆ ಕುರಿತು ಪರಿಶೀಲನೆ ಮಾಡಿ, ಕ್ರಮ ಕೈಗೊಳ್ಳುವಂತೆ ತಿಳಿಸಿದರು.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd