ಏಪ್ರಿಲ್ 20 ನಂತರ ರಾಜ್ಯದಲ್ಲಿ ಲಾಕ್ ಡೌನ್ ಸಡಿಲ ಮಾಡಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಅಲ್ಲದೆ ದ್ವಿಚಕ್ರ ವಾಹನ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದೀಗ ಏಪ್ರಿಲ್ 20 ರ ನಂತರದ ನಿಷೇಧಾಜ್ಞೆಯಲ್ಲಿ ಬದಲಾವಣೆ ಮಾಡಲಾಗಿದೆ. ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಣಯವನ್ನ ಪುನರ್ ಪರಿಶೀಲಿಸಿ, ಸಿಎಂ ಆದೇಶವನ್ನು ಹಿಂದಕ್ಕೆ ಪಡೆದಿದ್ದಾರೆ. ಹಾಗಾಗಿ ಲಾಕ್ ಡೌನ್ ಯಥಾಸ್ಥಿತಿಯಲ್ಲಿ ಮುಂದುವರೆಯುವುದು.ದ್ವಿಚಕ್ರ ವಾಹನ ಓಡಾಟಕ್ಕೆ ಅವಕಾಶ ಇಲ್ಲ.ಐಟಿ,ಬಿಟಿ ಕಂಪನಿಗಳಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದಂತೆ ನೌಕರರು ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ.
ಅರವಿಂದ ಅವೇಂಜರ್ಸ್ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








