ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಸ್ಫೋಟ ಮುಂದುವರಿದಿದ್ದು, ಇಂದು ಒಂದೇ ದಿನ 4764 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 75,833 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೇಲಿ ಹೆಮ್ಮಾರಿ ಸೋಂಕಿಗೆ 55 ಮಂದಿ ಕೊನೆಯುಸಿರೆದಿದ್ದು, ಇದುವರೆಗೆ 1519 ಜನ ಸಾವನ್ನಪ್ಪಿದ್ದಾರೆ. ಇನ್ನು ಇಂದು 1780 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ 47,069 ಸಕ್ರಿಯ ಪ್ರಕರಣಗಳಿವೆ.
ಇತ್ತ ಬೆಂಗಳೂರಿನಲ್ಲಿ ಕೊರೊನಾ ಅಬ್ಬರ ಜೋರಾಗಿದ್ದು, ಇಂದು ಒಂದೇ ದಿನ 2050 ಮಂದಿಗೆ ಸೋಂಕು ದೃಢಪಟ್ಟಿದೆ. 812 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಂದು 15 ಮಂದಿ ಕೊರೊನಾಗೆ ಕೊನೆಯುಸಿರೆಳೆದಿದ್ದಾರೆ. ಸದ್ಯ ನಗರದಲ್ಲಿ 27969 ಸಿಕ್ರಿಯ ಪ್ರಕರಣಗಳಿವೆ.








