ಮುಂದುವರಿದ ಕೊರೊನಾ ಅಬ್ಬರ : ನಿನ್ನೆ 62,714 ಮಂದಿಗೆ ಸೋಂಕು
ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 62,714 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 62,714 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 312 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,19,71,624ಕ್ಕೆ, ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,61,552ಕ್ಕೆ ಏರಿಕೆಯಾಗಿದೆ.
ಇನ್ನ ಒಟ್ಟಾರೆ 1,19,71,624 ಕೊರೊನಾ ಸೋಂಕಿತರ ಪೈಕಿ 1,13,23762 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು ದೇಶದಲ್ಲಿ 4,86,310 ಕೋವಿಡ್ ಸಕ್ರಿಯ ಪ್ರಕರಣಗಳಿವೆ.