ನವದೆಹಲಿ : ಭಾರತದಲ್ಲಿ ಕಿಲ್ಲರ್ ಕೊರೊನಾ ಆರ್ಭಟ ಮುಂದುವರಿದಿದ್ದು, ಕಳೆದ 24 ಗಂಟೇಲಿ 29 ಸಾವಿರಕ್ಕೂ ಅಧಿಕ ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೇಲಿ ಭಾರತದಲ್ಲಿ ಹೊಸದಾಗಿ 29,429 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,36,181 ಕ್ಕೆ ಏರಿಕೆಯಾಗಿದೆ. ಇನ್ನು ಇದೇ ಅವಧಿಯಲ್ಲಿ ಹೆಮ್ಮಾರಿ ಸೋಂಕಿಗೆ 582 ಜನ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 24,309ಕ್ಕೆ ಏರಿದೆ.
ಒಟ್ಟು 9,36,181 ಕೊರೊನಾ ಸೋಂಕಿತರ ಪೈಕಿ ಸದ್ಯ 3,19,840 ಸಕ್ರಿಯ ಪ್ರಕರಣಗಳಾಗಿದ್ದು, 5,92,032 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.







