ದೇಶದಲ್ಲಿ ಮುಂದುವರೆದ ಕೊರೊನಾ ಮರಣಕೇಕೆ, 4,209 ಮಂದಿ ಬಲಿ
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದರೂ ಸಾವುಗಳ ಸಂಖ್ಯೆ ಮಾತ್ರ ಕಡಿಮೆ ಆಗುತ್ತಿಲ್ಲ. ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಹೆಮ್ಮಾರಿ ಕೊರೊನಾ 4,209 ಮಂದಿಯನ್ನು ಬಲಿ ಪಡೆದುಕೊಂಡಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,59,591 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇದೇ ಅವಧಿಯಲ್ಲಿ 4,209 ಮಂದಿ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಾದ್ಯಂತ ಒಟ್ಟಾರೆ ಸೋಂಕಿತರ ಸಂಖ್ಯೆ 2,60,31,991ಕ್ಕೆ ಸೋಂಕಿಗೆ ಬಲಿಯಾದವರ ಸಂಖ್ಯೆ 2,91,331 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಮತ್ತಷ್ಟು ಟಫ್ ಆಗಲಿದೆ ಲಾಕ್ ಡೌನ್..!
ಇನ್ನು ನಿನ್ನೆ ದೇಶದಲ್ಲಿ 3,57,295 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿನಿಂದ 2,27,12,735 ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿನ್ನೂ 30,27,925 ಸಕ್ರಿಯ ಪ್ರಕರಣಗಳಿವೆ.










