ಲಾಕ್ ಡೌನ್ ಮುಂದುವರಿಕೆ, ಸಿಎಂ ಸಭೆ ಬಳಿಕ ನಿರ್ಧಾರ : ಬೊಮ್ಮಾಯಿ
ಬೆಂಗಳೂರು : ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಗೃಹ ಇಲಾಖೆ ಜೂನ್ 30 ರವರೆಗೂ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಈ ಬಗ್ಗೆ ಸಿಎಂ ಸಭೆ ಬಳಿಕ ನಿರ್ಧಾರ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಲಾಕ್ ಡೌನ್ ಮುಂದುವರೆಸುವ ಬಗ್ಗೆ ಬೆಂಗಳೂರಿನಲ್ಲಿ ಮಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ದೇಶದಲ್ಲಿ ಕೊರೊನಾ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ಜೂನ್ 30ರ ತನಕ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ.
ಹೀಗಾಗಿ ಇದರ ಬಗ್ಗೆ ರಾಜ್ಯದಲ್ಲಿ ಅನುಷ್ಠಾನ ಮಾಡುವ ಸಂಬಂಧ ಸಭೆ ನಡೆಸಿ ತೀರ್ಮಾನ ಮಾಡಲು ನಿರ್ಧಾರ ಮಾಡಲಾಗಿದೆ.
ಆದರೆ ಜೂನ್ 7ರ ವರೆಗೆ ಇರುವ ಲಾಕ್ ಡೌನ್ ನಲ್ಲಿ ಯಾವುದೇ ಬದಲಾವಣೆ ಮಾಡೋದಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಸದ್ಯ ಪಾಸಿಟಿವ್ ದರ ಶೇಕಡ 10ಕ್ಕಿಂತ ಹೆಚ್ಚಿದೆ. 10 ಕ್ಕಿಂತ ಕಡಿಮೆ ಬರುವ ತನಕ ತನಕ ಲಾಕ್ ಡೌನ್ ನಲ್ಲಿ ಸಡಿಲಿಕೆ ಇಲ್ಲ.
ಈವಾಗಿರುವ ಕಠಿಣ ನಿಯಮಗಳೇ ಮುಂದುವರಿಯಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.