ಬೆಳಗಾವಿಯಲ್ಲಿ ಮುಂದುವರೆದ ಮಳೆ : ಜನರ ಪರದಾಟ Belgaum
ಬೆಳಗಾವಿ : ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಬಿಟ್ಟು ಬಿಡದೇ ಮಳೆ ಆರ್ಭಟಿಸುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ನಿರಂತರ ಮಳೆಯಿಂದಾಗಿ ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಕೆಸರು ಗದ್ದೆಯಂತಾಗಿದೆ. ಇದರಿಂದ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ಮಾರ್ಟ್ ಸಿಟಿ ಯೋಜನೆಯಡಿ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿ ಸದ್ಯ ಚಾಲ್ತಿಯಲ್ಲಿದೆ. ಆದ್ರೆ ಕಾಮಗಾರಿ ಮಾತ್ರ ಕುಂಟುತ್ತಾ ಸಾಗುತ್ತಿದೆ.
ಕೇಂದ್ರ ಬಸ್ ನಿಲ್ದಾಣದ ತುಂಬಾ ಗುಂಡಿಗಳಿದ್ದು, ಮಳೆಯಿಂದ ನೀರು ತುಂಬಿಕೊಂಡು ಕೆರೆಯಂತಾಗಿದೆ.
ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಜನರು ಹಿಡಿ ಶಾಪ ಹಾಕುತ್ತಿದ್ದಾರೆ.










