ಬೆಂಗಳೂರು : ವಿಧಾನಸಭಾ ಕಲಾಪಗಳ ನೇರ ಪ್ರಸಾರಕ್ಕೆ ಖಾಸಗಿ ಸುದ್ದಿವಾಹಿನಿಗಳ ಕ್ಯಾಮೆರಾಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಸೋಮವಾರ ಪ್ರತಿಕಾಗೋಷ್ಠಿ ನಡೆಸಿದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯದಲ್ಲಿ ಕಳೆದ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಪ್ರಾಯೋಗಿಕವಾಗಿ ಖಾಸಗಿ ಸುದ್ದಿ ವಾಹಿನಿಗಳ ಕ್ಯಾಮೆರಾಗಳಿಗೆ ವಿಧಿಸಿದ್ದ ನಿರ್ಬಂಧವನ್ನು ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದರು.
ನಿರ್ಬಂಧ ಸರಿಯೇ ಮತ್ತು ಅದರಿಂದ ಪ್ರಯೋಜನವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭೆ, ರಾಜ್ಯಸಭೆ ಮಾದರಿಯಲ್ಲೇ ವಿಧಾನಸಭೆಯಲ್ಲಿ ಖಾಸಗಿ ಎಲೆಕ್ಟ್ರಾನಿಕ್ ಮಾಧ್ಯಮಗಳು ಸದನ ಕಲಾಪ ನೇರ ಪ್ರಸಾರ ಮಾಡುವುದಕ್ಕೆ ಅವಕಾಶ ನೀಡುತ್ತಿಲ್ಲ. ವ್ಯವಸ್ಥೆ ಪಾರದರ್ಶಕವಾಗಿರಬೇಕು ಎನ್ನುವುದರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ವಿಧಾನಸಭೆಯಲ್ಲಿ ನಡೆಯುವ ಚರ್ಚೆ ಪಾರದರ್ಶಕವಾಗಿದ್ದು, ಜನತೆಗೆ ತಿಳಿಯಬೇಕು ಎಂಬ ದೃಷ್ಟಿಯಿಂದ ಅಂಥ ವ್ಯವಸ್ಥೆ ಜಾರಿಗೊಳಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.
ವಕ್ಫ್ ಭೂ ಕಬಳಿಕೆ ವಿರುದ್ಧದ ಹೋರಾಟಕ್ಕೆ ಮಣಿದ ಸರ್ಕಾರ : ಸಮಿತಿ ರಚನೆಗೆ ಒಪ್ಪಿಗೆ – ಆರ್. ಆಶೋಕ್
ವಕ್ಫ್ ಮಂಡಳಿ ಹಿಂದೂಗಳು ಮತ್ತು ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದೇನೆ. ಈ ಹೋರಾಟದಲ್ಲಿ ಬಿಜೆಪಿಗೆ ತಕ್ಕ ಮಟ್ಟಿನ ಜಯ ದೊರಕಿದೆ....