ಬೆಂಗಳೂರು: ರಾಜ್ಯಕ್ಕೆ ವರುಣನ ಶಾಪ ತಟ್ಟಿದಂತಾಗಿದೆ. ಈ ಬಾರಿ ಮುಂಗಾರು ಮಳೆ ಕೈ ಕೊಟ್ಟಿದ್ದು, ರೈತರು ಆತಂಕ ವ್ಯಕ್ತಪಡಿಸುವಂತಾಗಿದೆ.
ಅಲ್ಲದೇ, ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಕೂಡ ಉದ್ಭವವಾಗಿದೆ. ಆದರೆ, ಹಲವು ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಅದು ಜೂನ್ 30ರ ವರೆಗೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 30ರ ವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ,ಯಾದಗಿರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ವಿಜಯಪುರ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.








