ನವದೆಹಲಿ : ಭಾರತದಲ್ಲಿ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಕಳೆದ ಕಳೆದ 24 ಗಂಟೆಗಳಲ್ಲಿ 38,902 ಹೊಸ ಪ್ರಕರಣ ದಾಖಲಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10,77,618ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ ನಿನ್ನೆ ದೇಶದಾದ್ಯಂತ 38,902 ಮಂದಿಗೆ ಸೋಂಕಿರುವುದು ದೃಢಪಟ್ಟಿದ್ದು, 543 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 10,77,618ಕ್ಕೆ ಏರಿದರೇ, ಇದುವರೆಗೂ 26,816 ಮಂದಿ ಕಿಲ್ಲರ್ ಕೊರೊನಾಗೆ ಮೃತಪಟ್ಟಿದ್ದಾರೆ.
ಇನ್ನು ದೇಶದ 10,77,618 ಮಂದಿ ಸೋಂಕಿತರ ಪೈಕಿ 6,77,423 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, 3,73,379 ಮಂದಿ ಇನ್ನೂ ಸೋಂಕಿನಿಂದ ಬಳಲುತ್ತಿದ್ದಾರೆ. ಆತಂಕದ ವಿಚಾರವೆಂದರೆ ಕಳೆದ 4 ದಿನಗಳಿಂದ 1,10,040 ಸೋಂಕಿತರು ಪತ್ತೆಯಾಗಿದ್ದಾರೆ. 1913 ಜನರು ಸಾವನ್ನಪ್ಪಿದ್ದಾರೆ.








