ದಾವಣಗೆರೆ: ಕಾಮುಕ ಶಿಕ್ಷಕನೊಬ್ಬ 7 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆಯೊಂದು ನಡೆದಿದೆ.
ಈ ಘಟನೆ (Davanagere) ನಗರದ ಸರ್ಕಾರಿ ಶಾಲೆಯೊಂದರಲ್ಲಿ (Government School) ನಡೆದಿದೆ. ಕಾಮುಕ ಶಿಕ್ಷಕ ಅಪ್ರಾಪ್ತೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದು, ಇತ್ತೀಚೆಗೆ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿದ್ದಾಳೆ. ಅಲ್ಲದೇ, ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದಾನೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರ ತಪಾಸಣೆ ಸಂದರ್ಭದಲ್ಲಿ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ಶಾಕ್ ಆದ ಪೋಷಕರು, ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೂಡಲೇ ಪೊಲೀಸರು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.








