ಭೋಪಾಲ್ : ಮಧ್ಯಪ್ರದೇಶ ಸರ್ಕಾರವು ಸಾಮೂಹಿಕ ವಿವಾಹ ನೆರವೇರಿಸಿ, ವಧು-ವರರಿಗೆ ಕಾಂಡೋಮ್ ಹಾಗೂ ಗರ್ಭ ನಿರೋಧಕ ಮಾತ್ರೆ(Contraceptive Pills)ಗಳನ್ನು ಗಿಫ್ಟ್ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ.
ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ (Shivraj Singh Chouhan) ಅವರ ನೇತೃತ್ವದಲ್ಲಿ ಸಾಮೂಹಿಕ ವಿವಾಹ ನೆರವೇರಿದ್ದವು. ಕನ್ಯಾ ವಿವಾಹ/ನಿಕಾಹ್ ಯೋಜನೆ ಅಡಿಯಲ್ಲಿ ಆರ್ಥಿಕ ದುರ್ಬಲ ವರ್ಗದ ಮಹಿಳೆಯರಿಗಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ (Wedding Event)ವನ್ನು ಸರ್ಕಾರ ನೆರವೇರಿಸಿತ್ತು. ಈ ಸಂದರ್ಭದಲ್ಲಿ ಗಿಫ್ಟ್ ನೀಡಿದ್ದ ಕಿಟ್ ನಲ್ಲಿ ಕಾಂಡೋಮ್ ಹಾಗೂ ಗರ್ಭನಿರೋಧಕ ಮಾತ್ರೆಗಳೂ ಇತ್ತು. ಆದ್ರೆ ಈ ಬಗ್ಗೆ ಕೇಳಿದಾಗ ಜಿಲ್ಲಾ ಹಿರಿಯ ಅಧಿಕಾರಿ ಭೂರಸಿಂಗ್ ರಾವತ್, ಕುಟುಂಬ ಯೋಜನೆಗೆ ಸಂಬಂಧಿಸಿದ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಆರೋಗ್ಯಾಧಿಕಾರಿಗಳು ಕಾಂಡೋಮ್ ಮತ್ತು ಗರ್ಭನಿರೋಧಕ ಮಾತ್ರೆಗಳನ್ನ ವಿತರಿಸಿರಬಹುದು ಎಂದು ಹೇಳಿದ್ದಾರೆ.
2006ರ ಏಪ್ರಿಲ್ನಲ್ಲಿ ಮಧ್ಯಪ್ರದೇಶ ಸರ್ಕಾರವು ಕನ್ಯಾ ವಿವಾಹ/ನಿಹಾಕ್ ಯೋಜನೆಯನ್ನ ಆರಂಭಿಸಿತು. ಆರ್ಥಿಕ ದುರ್ಬಲ ವರ್ಗದ ಮಹಿಳೆಯರ ವಿವಾಹಗಳಿಗೆ ಹಣಕಾಸು ನೆರವು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.