ವಿವಾದಾತ್ಮಕ ವಿಡಿಯೋ: ಸ್ವಾಮೀಜಿ ಅರೆಸ್ಟ್
ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವುವಂತೆ ವಿವಾದಾತ್ಮಕ ಹೇಳಿಕೆ ನೀಡಿ ವಿಡಿಯೋ ಬಿಡುಗಡೆ ಮಾಡಿದ ಕಾಳಿ ಸ್ವಾಮೀಜಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಿನ್ನೆ ರಿಷಿ ಕುಮಾರ್ ಸ್ವಾಮೀಜಿ ಮಸೀದಿ ಮುಂದೆ ನಿಂತು ಹಿಂದೂಗಳಿಗೆ ಕರೆ ನೀಡಿದ್ದರು. ಶ್ರೀರಂಗಪಟ್ಟಣದ ದೇವಾಲಯವನ್ನು ಕೆಡವಿ ಮಸೀದಿ ಮಾಡಿದ್ದಾರೆ. ಇದು ಮೊದಲು ದೇವಾಲಯವಿತ್ತು. ಇದನ್ನು ಕೆಡವಿದ್ದಾರೆ ಹಿಂದೂಗಳು ಅತಿ ಬೇಗ ಜಾಗೃತರಾಗಿ ಒಡೆಯಬೇಕಾದ ಮಸೀದಿಯಲ್ಲಿ ಇದೂ ಒಂದು. ಇದನ್ನು ಆದಷ್ಟು ಬೇಗ ಬಾಬ್ರಿ ಮಸೀದಿ ರೀತಿಯಲ್ಲಿ ಕೆಡವಬೇಕೆಂದು ರಿಷಿ ಕುಮಾರ್ ಸ್ವಾಮೀಜಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಹಾನಿ ಆಗುವ ನಿಟ್ಟಿನಲ್ಲಿ ಚಿಕ್ಕಮಗಳೂರು ಪೊಲೀಸರು ಸ್ವಾಮೀಜಿಯನ್ನು ಇಂದು ಬೆಳಿಗನ ಜಾವ 4-30ಕ್ಕೆ ಚಿಕ್ಕಮಗಳೂರು ಮಠದಲ್ಲಿ ವಶಕ್ಕೆ ಪಡೆದಿದ್ದಾರೆ. ಸದ್ಯ ರಿಷಿ ಕುಮಾರ್ ಸ್ವಾಮೀಜಿಯನ್ನು ಪೊಲೀಸರು ಶ್ರೀರಂಗಪಟ್ಟಣ ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.








