ಮಂಗಳೂರಲ್ಲಿ ವಿವಾದಿತ ಬರಹ : ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
ಮಂಗಳೂರು : ನಗರದಲ್ಲಿ ‘ಲಷ್ಕರ್ ಝಿಂದಾಬಾದ್’ ಎಂದು ವಿವಾದಿತ ಬರಹ ಬರೆದವರನ್ನು ಬಂಧಿಸುವಂತೆ ಒತ್ತಾಯಿಸಿ ಕದ್ರಿ ಮಲ್ಲಿಕಟ್ಟೆಯಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಮಂಗಳೂರಿನ ಸಕ್ರ್ಯೂಟ್ ಹೌಸ್ ರಸ್ತೆಯಲ್ಲಿರೋ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಹ್ಯಾಷ್ ಟ್ಯಾಗ್ ಹಾಕಿ ‘ಲಷ್ಕರ್ ಜಿಂದಾಬಾದ್’ ಎಂದು ಕಿಡಿಗೇಡಿಗಳು ಬರೆದಿದ್ದರು. ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ : ಬಿ.ಕೆ.ಹರಿಪ್ರಸಾದ್ ಆಗ್ರಹ
ಜೊತೆಗೆ `ಡು ನಾಟ್ ಫೋರ್ಸ್ ಅಸ್ ಟು ಇನ್ವೈಟ್ ತಾಲಿಬಾನ್ ಅಂಡ್ ಲಷ್ಕರ್-ಇ-ತೊಯ್ಬಾ ಟು ಡೀಲ್ ವಿತ್ ಸಂಘೀಸ್ ಆಂಡ್ ಮನ್ವೇದಿಸ್ ಎಂದು ಇಂಗ್ಲೀಷ್ ನಲ್ಲಿ ಬರೆಯಲಾಗಿತ್ತು.
ಅಂದರೆ ಸಂಘಿಗಳು ಮತ್ತು ಮನುವಾದಿಗಳ ವಿರುದ್ಧ ಹೋರಾಟಕ್ಕೆ ಲಷ್ಕರ್-ಇ-ತೊಯ್ಬಾ, ತಾಲಿಬಾನ್ ಸಂಘಟನೆಗೆ ಆಹ್ವಾನಿಸಲು ನಮ್ಮನ್ನು ಪ್ರೇರೇಪಿಸಬೇಡಿ ಎಂದಾಗಿದೆ.
ಇದರ ಮಾಹಿತಿ ತಿಳಿದ ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿವಾಧಿತ ಬರಹದ ಮೇಲೆ ಪೈಂಟ್ ಮಾಡಿಸಿದ್ದಾರೆ. ಜೊತೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಅಲ್ಲದೆ ಸಕ್ರ್ಯೂಟ್ ಹೌಸ್ ರಸ್ತೆಯಲ್ಲಿರೋ ಅಪಾರ್ಟ್ ಮೆಂಟ್ ಸುತ್ತಮುತ್ತಲಿನ ರಸ್ತೆಗಳ ಸಿಸಿ ಟಿವಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಸಿಎಂ ನಮ್ಮನ್ನು ಮಂತ್ರಿ ಮಾಡಲು ನಿರ್ಧಾರ ಮಾಡಿಲ್ಲ : ಎಂಟಿಬಿ ಅಸಮಾಧಾನ
ಇತ್ತ ಈ ಘಟನೆಯನ್ನು ಖಂಡಿಸಿ ಕದ್ರಿ ಮಲ್ಲಿಕಟ್ಟೆಯಲ್ಲಿ ವಿಶ್ವಹಿಂದೂ ಪರಿಷತ್, ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾಕಾರರು ವಿವಾಧಿತ ಬರಹ ಬರೆದವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










