ಅಕ್ರಮ ಒಳನುಸುಳುವಿಕೆ ವಿಚಾರ ಮತ್ತೆ ಬಿಸಿ ಚರ್ಚೆಗೆ ಕಾರಣವಾಗಿದೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿರುವ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.
ಒಳನುಸುಳುವಿಕೆ ಸಮಸ್ಯೆಯ ಕುರಿತು ಮಾತನಾಡಿದ ಮಹುವಾ ಮೊಯಿತ್ರಾ, ಇದನ್ನು ನಿಲ್ಲಿಸುವುದು ಗೃಹ ಸಚಿವ ಅಮಿತ್ ಶಾ ಅವರ ಜವಾಬ್ದಾರಿ. ಒಳನುಸುಳುವವರು ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲೆ, ನಮ್ಮ ಜಮೀನಿನ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಮೊದಲು ಗೃಹ ಸಚಿವ ಅಮಿತ್ ಶಾ ಅವರ ತಲೆಯನ್ನು ಕತ್ತರಿಸಿ ಮೇಜಿನ ಮೇಲೆ ಇಡಬೇಕು ಎಂದು ಕಠಿಣ ಶಬ್ದಗಳಲ್ಲಿ ಹೇಳಿದ್ದಾರೆ.
ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಬಿಜೆಪಿ ನಾಯಕಿ ಡಾ. ಶತ್ರುಪಾ ಭಟ್ಟಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಮಹುವಾ ಮೊಯಿತ್ರಾ ಅವರ ಭಾಷೆ ಅಸಂಸ್ಕೃತ ಮತ್ತು ಕ್ರೂರ. ಇಂಥ ಹೇಳಿಕೆ ನೀಡುವವರು ‘ನರಭಕ್ಷಕ’ರಂತೆ ವರ್ತಿಸುತ್ತಿದ್ದಾರೆ. ದೇಶದ ಗೃಹ ಸಚಿವರ ವಿರುದ್ಧ ಹೀಗೆ ಮಾತನಾಡುವುದು ಸಹಿಸಲಾಗದ ವಿಚಾರ ಎಂದು ಆರೋಪಿಸಿದ್ದಾರೆ.
ಮಹುವಾ ಮೊಯಿತ್ರಾ ಅವರ ಈ ಹೇಳಿಕೆಯ ಬಗ್ಗೆ ಬಿಜೆಪಿ ನಾಯಕರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹ ವ್ಯಕ್ತಪಡಿಸಿದ್ದಾರೆ.
ರಾಜಕೀಯ ವಲಯದಲ್ಲಿ ಈಗ ‘ಹೇಟ್ ಸ್ಪೀಚ್’ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ.
ಟಿಎಂಸಿ ನಾಯಕಿಯ ಈ ವಿವಾದಾತ್ಮಕ ಹೇಳಿಕೆ ಮುಂದಿನ ದಿನಗಳಲ್ಲಿ ರಾಜಕೀಯ ಅಖಾಡದಲ್ಲಿ ದೊಡ್ಡ ತಲೆನೋವಾಗಿ ಮಾರ್ಪಾಡಾಗುವ ಲಕ್ಷಣಗಳು ಗೋಚರಿಸುತ್ತಿವೆ.








