ಬೆಂಗಳೂರು: ರಾಜಧಾನಿಯಲ್ಲಿ (Bengaluru) ಮಂಗಳವಾರ ಸಂಶಯಾಸ್ಪದವಾಗಿ ಕುಕ್ಕರ್ ಸ್ಫೋಟಗೊಂಡ (Cooker Blast) ಪರಿಣಾಮ ಚಿಕಿತ್ಸೆ ಫಲಿಸದೆ ಓರ್ವ ಸಾವನ್ನಪ್ಪಿರುವ ಘಟನೆ ಜೆಪಿ ನಗರದಲ್ಲಿ (JP Nagar) ನಡೆದಿದೆ.
ಕುಕ್ಕರ್ ಸ್ಫೋಟದಲ್ಲಿ ಉತ್ತರ ಪ್ರದೇಶ ಮೂಲದ ಮೋಸಿನ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸಮೀರ್ ಎಂಬ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೆಪಿ ನಗರ 24ನೇ ಮುಖ್ಯರಸ್ತೆಯ ಉಡುಪಿ ಉಪಹಾರದ ಮನೆಯ ಬಳಿ ಈ ಘಟನೆ ನಡೆದಿದೆ.
ಪ್ರಾಥಮಿಕ ತನಿಖೆಯಲ್ಲಿ ಇದು ಕುಕ್ಕರ್ ಸ್ಫೋಟ ಎನ್ನಲಾಗಿದೆ. ಅಡುಗೆ ಮಾಡಲು ಇಟ್ಟ ವೇಳೆ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಸ್ಪೋಟದಿಂದಾಗಿ ರೂಂನಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಪ್ರಾಥಮಿಕ ತನಿಖೆಯಲ್ಲಿ ಕುಕ್ಕರ್ ಸ್ಫೋಟ ಎನ್ನಲಾಗಿದ್ದು, ಸುಟ್ಟ ವಯರ್ ಗಳು ಕೂಡ ಪತ್ತೆಯಾಗಿವೆ. ಹೀಗಾಗಿ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯಾ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.