ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ (Rakshit Shetty) ವಿಚಾರಣೆಗೆ ಹಾಜರಾಗಿದ್ದಾರೆ.
ನಗರದ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಹಾಡು ಮತ್ತು ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಹಾಡನ್ನು ಅನುಮತಿ ಇಲ್ಲದೆ ಬಳಕೆ ಮಾಡಿಕೊಂಡಿದ್ದಾರೆ ಎಂದು ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಜುಲೈ 15ರಂದು ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ಸಲ್ಲಿಸಿದ್ದರು. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ’ ಹಾಡು ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲಾಗಿತ್ತು. ಹೀಗಾಗಿ ರಕ್ಷಿತ್ ಶೆಟ್ಟಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.








