ತಿರುವನಂತಪುರಂ : ಕೊರೊನಾ ವೈರಸ್ ಅನ್ನು ಸಮರ್ಥವಾಗಿ ಎದುರಿಸುತ್ತಿರುವ ಕೇರಳದಲ್ಲಿ ಇದೀಗ ಕೋವಿಡ್ 19 2ನೇ ಅಲೆ ಶುರುವಾಗಿದೆ.
ಈ ಹಿನ್ನೆಲೆ ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ಲಾಕ್ ಡೌನ್ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಬಂದ್| ಹುಬ್ಬಳ್ಳಿಯಲ್ಲಿ ತೀವ್ರಗೊಂಡ ಪ್ರತಿಭಟನೆ ಕಿಚ್ಚು
ಕೇರಳ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಉತ್ತಮ ಮತ್ತು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಆದ್ರೆ ಈಗ ಜನರು ಬೇಜವಾಬ್ದಾರಿಯಿಂದ ವರ್ತಿಸುತ್ತ ಕೊರೊನಾ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದ್ದಾರೆ.
ಹೀಗೆ ಮುಂದುವರಿದರೇ ಎರಡನೇ ಬಾರಿಗೆ ಲಾಕ್ ಡೌನ್ ಹೇರುವ ಜೊತೆಗೆ ಮತ್ತಷ್ಟು ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ.
ಮತ್ತೆ ಲಾಕ್ ಡೌನ್ ತಪ್ಪಿಸಲು ರಾಜ್ಯವು ಉತ್ತಮವಾಗಿ ಪ್ರಯತ್ನಿಸುತ್ತಿದೆ. ಆದರೆ ಜನರು ಅಧಿಕಾರಿಗಳೊಂದಿಗೆ ಸಹಕರಿಸಲು ಸಿದ್ಧರಿಲ್ಲದಿದ್ದರೆ ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಕೆ.ಕೆ.ಶೈಲಜಾ ತಿಳಿಸಿದ್ದಾರೆ.
ಸದ್ಯ ಕೇರಳದಲ್ಲಿ 1,67,939 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರಲ್ಲಿ 1,14,530 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇನ್ನೂ ಕೊರೊನಾಗೆ ರಾಜ್ಯದಲ್ಲಿ 656 ಜನರು ಬಲಿಯಾಗಿದ್ದಾರೆ.