ಕೊರೊನಾ ರಿಪೋರ್ಟ್ : ದೇಶದ ಜನತೆಗೆ ನೆಮ್ಮದಿಯ ಸುದ್ದಿ
ನವದೆಹಲಿ : ದೇಶದಲ್ಲಿ ಕೊರೊನಾ ಮೂರನೇ ಅಲೆ ಶುರುವಾಗುತ್ತಿರುವ ಲಕ್ಷಣಗಳು ಕಾಣುತ್ತಿರುವ ಬೆನ್ನಲ್ಲೇ ದೇಶದ ಜನತೆಗೆ ಒಂದಿಷ್ಟು ನೆಮ್ಮದಿ ಸಿಕ್ಕಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 30,549 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಇದೇ ಅವಧಿಯಲ್ಲಿ ದೇಶದಲ್ಲಿ ಕೊರೊನಾ ಸೋಂಕಿನಿಂದ 422 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ..
ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,17,26,507 ಕ್ಕೆ ಏರಿಕೆಯಾಗಿದೆ.
ಜೊತೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,25,195 ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ ದೇಶದಲ್ಲಿ 38,887 ಕೊರೊನಾದಿಂದ ಗುಣಮುಖರಾಗಿದ್ದು, ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 3,08,96,354 ಕ್ಕೆ ಏರಿಕೆಯಾಗಿದೆ.
ಸದ್ಯ ದೇಶದಲ್ಲಿ 4,04,958 ಸಕ್ರಿಯ ಪ್ರಕರಣಗಳಿವೆ.









