ಕೊರೊನಾ | ದೇಶದಲ್ಲಿ 93.57 ಲಕ್ಷ ಮಂದಿ ಗುಣಮುಖ
ನವದೆಹಲಿ : ದೇಶದಲ್ಲಿ ಹೆಮ್ಮಾರಿ ಕೊರೊನಾ ಸೋಂಕಿನ ಆರ್ಭಟ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ 30,254 ಸೋಂಕಿತರು ಪತ್ತೆಯಾಗಿದ್ದಾರೆ.
ಇದೇ ಅವಧಿಯಲ್ಲಿ 391 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 98,57,029 ಹಾಗೂ ಮೃತರ ಸಂಖ್ಯೆ 1,43,019ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಒಟ್ಟು 98,57,029 ಸೋಂಕಿತರ ಪೈಕಿ 93,57,464 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನುಳಿದಂತೆ 3,56,546 ಕೇಸ್ ಗಳು ಸಕ್ರಿಯವಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ದೇಶದಲ್ಲಿ ಡಿಸೆಂಬರ್ 12ರವರೆಗೆ 15,37,11,833 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ನಿನ್ನೆ 10,14,434 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









