ಬೆಂಗಳೂರು : ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಕೊರೊನಾ ವೈರಸ್ ಸೋಂಕಿರುವುದು ದೃಢವಾಗಿದೆ.
ಈ ಕುರಿತು ದಿನೇಶ್ ಗುಂಡೂರಾವ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ಕೋವಿಡ್ ಟೆಸ್ಟ್ ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ.
ಕರ್ನಾಟಕ ಬಂದ್ ಗೆ ಜೆಡಿಎಸ್ ಬೆಂಬಲ : ಹೆಚ್.ಡಿ ದೇವೇಗೌಡ
ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಕ್ರಮ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ವಿನಂತಿಸುತ್ತೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.