ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಅಟ್ಟಹಾಸ ಮುಂದುವರೆದಿದ್ದು, ಇಂದು 161 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಜತೆಗೆ ಬೆಂಗಳೂರಿನಲ್ಲಿ 65 ವರ್ಷದ ವೃದ್ಧ ಹಾಗೂ ಕಲಬುರಗಿಯಲ್ಲಿ 17 ವರ್ಷದ ಯುವತಿಯನ್ನು ಕೊರೊನಾ ಬಲಿ ಪಡೆದಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ವೈರಸ್‌ಗೆ ಬಲಿಯಾದವರ ಸಂಖ್ಯೆ ೬೬ಕ್ಕೆ ಏರಿದೆ.
ಬೆಂಗಳೂರು ನಗರದಲ್ಲಿ 65 ವರ್ಷದ ವೃದ್ಧರೊಬ್ಬರು ತೀವ್ರ ಉಸಿರಾಟದ ಜತೆಗೆ ಜ್ವರದಿಂದ ಬಳಲುತ್ತಿದ್ದರು. ಅವರನ್ನು ಜೂನ್ ೩ರಂದು ಚಿಕಿತ್ಸೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ನಂತರ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೊದಲೇ ಶುಗರ್, ಬಿಪಿ ಹಾಗೂ ಕಿಡ್ನಿ ತೊಂದರೆಯಿಮ ದ ಬಳಲುತ್ತಿದ್ದ ವೃದ್ಧ, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ.
ಕಲಬುರಗಿಯಲ್ಲಿ ಕೊರೊನಾ ಹೆಮ್ಮಾರಿ ಅಟ್ಟಹಾಸ ಮುಂದುವರೆದಿದ್ದು, ಯುವತಿಯೊಬ್ಬರನ್ನು ಬಲಿ ಪಡೆದಿದೆ. ಜ್ವರ, ತಲೆನೋವು ಹಾಗೂ ಉಸಿರಾಟದ ತೊಂದರೆ ಹಾಗೂ ನರ ಸಂಬAದಿ ತೊಂದರೆಯಿಮದ ಬಳಲುತ್ತಿದ್ದ 17 ವರ್ಷದ ಯುವತಿಯನ್ನು ಜೂನ್ 4 ರಂದು ಕಲಬುರಗಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಂದೇ ಮೃತಪಟ್ಟಿದ್ದರು. ಬಳಿಕ ಮೃತಳ ಶವದ ಗಂಟಲು ದ್ರಹ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಯಾದಗಿರಿಯಲ್ಲಿ ಅತಿ ಹೆಚ್ಚು ಪ್ರಕರಣ
ಯಾದಗಿರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಇಂದು 61 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ 61 ಪ್ರಕರಣಗಳಲ್ಲೂ ಎಲ್ಲರೂ ಮಾಹಾರಾಷ್ಟçದಿಂದ ಹಿಂದಿರುಗಿದವರೇ ಆಗಿದ್ದಾರೆ.
ಬೆಂಗಳೂರು ನಗರದಲ್ಲಿ 29 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇವರಲ್ಲಿ ಬಹುತೇಕರು ಬೇರೆ ರಾಜ್ಯಗಳಿಂದ ಪ್ರಯಾಣ ಮಾಡಿದ ಮಾಹಿತಿ ಇಲ್ಲ. ಕೆಲವರಿಗೆ ಪತ್ತೆಯಾದ ಸೋಂಕು ಯಾರಿಂದ ಹರಡಿದೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ 23, ಕಲಬುರಗಿ 10, ಬೀದರ್ 9 ದಾವಣಗೆರೆ, 8, ಕೊಪ್ಪಳ 6, ಶಿವಮೊಗ್ಗ 4 ವಿಜಯಪುರ, ಮೈಸೂರು, ಚಿಕ್ಕಬಳ್ಳಾಪುರ, ಧಾರವಾಡದಲ್ಲಿ ತಲಾ ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಮಂಗಳೂರಿನಲ್ಲಿ ಪತ್ತೆಯಾದ 23 ಪ್ರಕರಣಗಳ ಪೈಕಿ ಅತಿ ಹೆಚ್ಚು ದುಬೈನಿಂದ ವಾಪಸ್ ಆದವರಲ್ಲೇ ಕೊರೊನಾ ಇರುವುದು ದೃಢಪಟ್ಟಿದೆ.







