ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರಣಕೇಕೆ ಜೋರಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ನಗರದ ಹೊಸ ಪ್ರದೇಶಗಳಗೆ ಸೋಂಕು ಹರಡುತ್ತಿದ್ದು, ಕೋವಿಡ್ ನಿಯಂತ್ರಣ ಸವಾಲಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಜ್ಞರ ತುರ್ತುಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಸೋಂಕು ತಡೆಗೆ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.
ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ಬೆಂಗಳೂರು ನಗರದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ನಿನ್ನೆ ಒಂದೇ ದಿನ ಬೆಂಗಳೂರಿನಲ್ಲಿ 503 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,555 ಕ್ಕೆ ತಲುಪಿದೆ.
ಇನ್ನು 171 ಸೋಂಕಿತರ ಸ್ಥಿತಿ ಗಂಭೀರವಾಗಿದ್ದು, ಇದುವರೆಗೂ ಬೆಂಗಳೂರಿನ 95 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.








