ವಿಟ್ಲ : ಕೊರೊನಾ ವೈರಸ್ ಸೋಂಕು ರಾಜ್ಯದಾದ್ಯಂತ ಕ್ಷಿಪ್ರಗತಿಯಲ್ಲಿ ತನ್ನ ಕಬಂದ ಬಾಹುಗಳನ್ನು ಚಾಚುತ್ತಿದೆ. ಇದರ ಮಧ್ಯೆ ವಿಟ್ಲದಲ್ಲೂ ಕೊರೊನಾ ಬಿರುಗಾಳಿ ಬೀಸಿದ್ದು, ಕನ್ಯಾನ ಗ್ರಾಮದ ಸುಮಾರು 33 ವರ್ಷದ ವ್ಯಕ್ತಿಯೊಬ್ಬರಿಗೆ ತೀವ್ರ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನಲೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಬೆಂಗಳೂರಿನಿಂದ ತಿಂಗಳ ಹಿಂದೆ ಬಂದಿದ್ದಾರೆನ್ನಲಾಗಿದೆ. ಇದೇ ಕಾರಣದಿಂದಾಗಿ ಅವರಲ್ಲಿ ಜ್ವರ ಕಾಣಿಸಿಕೊಂಡಾಕ್ಷಣ ಮುನ್ನೆಚ್ಚರಿಕೆಯ ದೃಷ್ಠಿಯಿಂದ ಮಂಗಳೂರು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.
ವೈದ್ಯಕೀಯ ತಪಾಸಣಾ ವರದಿ ಬಂದ ತಕ್ಷಣ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಾಲೂಕು ವೈದ್ಯಾಧಿಕಾರಿ ದೀಪಾ ಪ್ರಭು ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.








