ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಇದೀಗ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದಲ್ಲಿಯೂ ಕಿಲ್ಲರ್ ಕೊರೊನಾ ಭೀತಿ ಆರಂಭವಾಗಿದೆ.
ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಪತಿಗೆ ಕೊರೊನಾ ದೃಢಪಟ್ಟಿದೆ. ಈ ಮಹಿಳಾ ಪೊಲೀಸ್ ಹಲವು ದಿನಗಳಿಂದ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹೀಗಾಗಿ ಸಿಬ್ಬಂದಿ ಕಚೇರಿಯನ್ನ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸದ್ಯ ಮುಖ್ಯಮಂತ್ರಿಗಳ ಎಲ್ಲ ಕಾರ್ಯಕ್ರಮಗಳು ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದೆ. ಯಾರೊಬ್ಬರಿಗೂ ಇಂದು ಗೃಹ ಕಚೇರಿ ಕೃಷ್ಣಾಗೆ ಪ್ರವೇಶ ಇರುವುದಿಲ್ಲ ಎಂದು ಸಿಎಂ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಇನ್ನು ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಪತಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಬೆನ್ನಲ್ಲೇ ಮಹಿಳಾ ಅಧಿಕಾರಿಗೂ ಗುರುವಾರ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರ ವರದಿ ಇಂದು ಸಂಜೆ ಬರಲಿದೆ.








