ಕೊರೊನಾ ಆತಂಕ : ತುಮಕೂರಲ್ಲಿ ದೇವಸ್ಥಾನ, ಪ್ರವಾಸಿತಾಣಗಳು ಬಂದ್ Tumkur saaksha tv
ತುಮಕೂರು : ಕೊರೊನಾ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತುಮಕೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಜಿಲ್ಲೆಯಾದ್ಯಂತ ದೇವಸ್ಥಾನ, ಪ್ರವಾಸಿತಾಣಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ತುಮಕೂರು ಜಿಲ್ಲೆ ನೆರೆಯ ಆಂಧ್ರ ಪ್ರದೇಶಕ್ಕೂ ಹೊಂದಿಕೊಂಡಿದೆ. ಅಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ.
ಜೊತಗೆ ಶ್ರಾವಣ ಮಾಸ ಮುಂಬರುವ ಹಬ್ಬಗಳಿಗೆ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಸಾಕಷ್ಟು ಮಂದಿ ಭೇಟಿ ನೀಡುವ ಕಾರಣ ಜಿಲ್ಲೆಯಲ್ಲಿ ಇದೀಗ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ದೈನಂದಿನ ಪೂಜಾ ಕಾರ್ಯಕ್ರಮಗಳನ್ನು ಹೊರತುಪಡಿಸಿ ಭಕ್ತಾದಿಗಳಿಗೆ ನಿಷೇಧ ಇದೆ. ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ.









