ಮಂಡ್ಯ : ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ ಗೌಡ ಅವರಿಗೆ ಕೊರೊನಾ ವೈರಸ್ ಸೋಂಕಿರುವುದು ದೃಢವಾಗಿದೆ. ಕೋವಿಡ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಸುರೇಶ್ ಗೌಡ ಅವರು ನಿನ್ನೆ ಬೆಂಗಳೂರನಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಇಂದು ಅವರ ವರದಿ ಬಂದಿದ್ದು, ಕೋವಿಡ್ ಸೋಂಕಿರುವುದು ದೃಢವಾಗಿದೆ.
ಸದ್ಯ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಹೋಂ ಕ್ವಾರಂಟೈನ್ ಆಗಿದ್ದಾರೆ. ಇನ್ನು ಶಾಸಕರು ಕೆಲ ದಿನಗಳಿಂದೆ ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.