ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ನಗರದ ರಾಜಾಜಿನಗರದ ಇಎಸ್‌ಐ ಆಸ್ಪತ್ರೆ ವೈದ್ಯರು ಸೇರಿದಂತೆ 10 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಎಸ್‌ಐ ಆಸ್ಪತ್ರೆ ಪ್ರಸೂತಿ ತಜ್ಞೆ, ವೈದ್ಯಕೀಯ ವಿದ್ಯಾರ್ಥಿನಿ, ಸ್ಟಾಫ್ ನರ್ಸ್ ಸೇರಿದಂತೆ 10 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಕ್ವೌರಿಕರಿಗೆ ಕೊರೊನಾ..!
ಹಾಸನ ಜಿಲ್ಲೆಯಲ್ಲಿ 31 ಮಂದಿಗೆ ಮಹಾಮಾರಿ ಕೊರೊನಾ ವಕ್ಕರಿಸಿದ್ದು, ಜನತೆಯನ್ನ ಆತಂಕಕ್ಕೆ ದೂಡಿದೆ. ಹಾಸನದ ಇಬ್ಬರು ಕ್ವೌರಿಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅದೇ ರೀತಿ ಹೊಳೆನರಸೀಪುರದ ಐವರು ಪೌರ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ, ಆದರೂ ಹೇಗೆ ಕೊರೊನಾ ಹೇಗೆ ಬಂತು ಎಂಬುದು ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.
ಆಶಾ ಕಾರ್ಯಕರ್ತೆಯರಿಗೂ ಕೊರೊನಾ..!
ಕಲಬುರಗಿ ಹಾಗೂ ಹಾವೇರಿಯ ಆಶಾ ಕಾರ್ಯಕರ್ತೆಯರಿಗೂ ಮಹಾಮಾರಿ ವಕ್ಕರಿಸಿದೆ. ಹಾವೇರಿ ಜಿಲ್ಲೆಯ ಹಾನಗಲ್‌ನ ಇಬ್ಬರು ಆಶಾ ಕಾರ್ಯಕರ್ತೆಯರು ಹಾಗೂ ಹಿರೇಕೆರೂರಿನ ಒಬ್ಬ ಆಶಾ ಕಾರ್ಯಕರ್ತೆಗೆ ಕೊರನಾ ಬಂದಿದೆ.
ಇನ್ನು, ಕಲಬುರಗಿ ಜಿಲ್ಲೆ ಅಳಂದ ತಾಲೂಕಿನ ಆಶಾ ಕಾರ್ಯಕರ್ತೆಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಬೀದರ್‌ನ ಗಾಂಧಿಗAಜ್ ಪೊಲೀಸ್ ಠಾಣೆಯ ಮುಖ್ಯಪೇದೆಗೆ ಕೊರೊನಾ ಪಾಸಿಟಿವ್ ಬಂದಿದ್ದು, ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗೂ ಕೊರೊನಾ ಪಾಸಿಟಿವ್
ಬಳ್ಳಾರಿ ಜಿಲ್ಲೆಯಲ್ಲಿ ಇಂಗ್ಲಿಷ್ ಪರೀಕ್ಷೆ ಬರೆದ ನಂತರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗೂ ಕೊರೊನಾ ಪಾಸಿಟಿವ್ ಬಂದಿದೆ. ಕಪಗಲ್ ಗ್ರಾಮದ ವಿದ್ಯಾರ್ಥಿ ಪರೀಕ್ಷೆ ಬರೆದು ಮನೆಗೆ ಮರಳುವಾಗ ಅಪಘಾತವಾಗಿತ್ತು. ಗಾಯಗೊಂಡ ಬಾಲಕನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಗಂಟಲು ಮಾದರಿ ಪರೀಕ್ಷೆ ನಡೆಸಿದಾ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಬಾಲಕ ಪರೀಕ್ಷೆ ಬರೆದ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳಿಗೂ ಕೊರೊನಾ ಆತಂಕ ಶುರುವಾಗಿದೆ.