ಮದ್ದೂರು ತಾಲೂಕು ಕಚೇರಿಯಲ್ಲಿ ಕೊರೊನಾ ಸ್ಫೋಟ : 14 ಮಂದಿಗೆ ಸೋಂಕು
ಮಂಡ್ಯ : ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆ ಸುನಾಮಿಯಂತಾಗಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಇದೀಗ ಜಿಲ್ಲೆಯ ಮದ್ದೂರು ತಾಲೂಕು ಕಚೇರಿಯಲ್ಲಿ ಕೊರೊನಾ ಸೋಂಕು ಸ್ಫೋಟವಾಗಿದ್ದು, 14 ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಕೆಲವು ದಿನಗಳಿಂದಷ್ಟೆ ಮದ್ದೂರು ತಹಶೀಲ್ದಾರ್ ನರಸಿಂಹಮೂರ್ತಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.
ಇದೀಗ ಅವರ ಸಂಪರ್ಕದಲ್ಲಿದ್ದ ಸಿಬ್ಬಂದಿಗಳಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ತಹಶೀಲ್ದಾರ್ ಗೆ ಕೊರೊನಾ ಧೃಡಪಟ್ಟ ಹಿನ್ನೆಲೆಯಲ್ಲಿ ತಾಲೂಕು ಕಚೇರಿ ಸಿಬ್ಬಂದಿಗೆ ರ್ಯಾಂಡಮ್ ಟೆಸ್ಟ್ ಮಾಡಲಾಗಿತ್ತು.
ಇದೀಗ ಅದರ ವರದಿ ಬಂದಿದ್ದು, 14 ಮಂದಿಗೆ ಸೋಂಕಿರುವುದು ದೃಢಪಟ್ಟಿದೆ.
ಇದರಿಂದಾಗಿ ಉಳಿದ ಸಿಬ್ಬಂದಿಗಳಿಗೂ ಕೊರೊನಾ ಸೋಂಕಿನ ಆತಂಕ ಎದುರಾಗಿದೆ.
ಸದ್ಯ ತಾಲೂಕು ಕಚೇರಿಯನ್ನ ಸ್ಯಾನಿಟೈಜ್ ಮಾಡಲಾಗಿದೆ.









