ಬೆಂಗಳೂರಲ್ಲಿ ಕೊರೊನಾ ಸ್ಫೋಟ : ಸಚಿವ ಸೋಮಣ್ಣ ಮಹತ್ವದ ಸಭೆ Bengaluru
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸಚಿವ ಸೋಮಣ್ಣ ಬಿಬಿಎಂಪಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.
ಬಿಬಿಎಂಪಿ ಕಚೇರಿಯಲ್ಲಿ ಸೋಮಣ್ಣ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಪೆÇಲೀಸ್ ವರಿಷ್ಠರು-ಅರೋಗ್ಯಾಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದರು.
ಸಭೆಯಲ್ಲಿ ಕೊರೊನಾಗೆ ಬ್ರೇಕ್ ಹಾಕೋಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ನಿಯಮಗಳನ್ನು ಮತ್ತಷ್ಟು ಕಠಿಣ ಗೊಳಿಸುವ ಬಗ್ಗೆ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಬಗ್ಗೆ ಮಾತುಕತೆ ನಡೆದಿದೆ.










