ಚಾಮರಾಜನಗರ : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಫೋಟವಾಗಿದೆ. ಇಂದು ಜಿಲ್ಲೆಯಲ್ಲಿ ಒಂಭತ್ತು ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲೆಯ ಜನರ ಆತಂಕ ಹೆಚ್ಚಿದೆ.
ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಈ ಒಂಭತ್ತು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಪಟ್ಟಣದ ನಾಯಕರ ಬೀದಿಯಲ್ಲಿ ಒಂದು, ಕನಕದಾಸ ಬಡಾವಣೆಯಲ್ಲಿ ಒಂದು, ಮಹದೇವ ಪ್ರಸಾದ್ ಬಡಾವಣೆಯಲ್ಲಿ ಏಳು ಕೊರೊನಾ ಕೇಸ್ ಗಳು ದೃಢಪಟ್ಟಿವೆ. ಈ ಹಿನ್ನೆಲೆ ಈ ಎಲ್ಲಾ ಬಡಾವಣೆ ಮತ್ತು ನಾಯಕರ ಬೀದಿಯನ್ನು ಸೀಲ್ ಡೌನ್ ಮಾಡಿ ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ.
ಇನ್ನು ಒಂಭತ್ತು ಮಂದಿ ಕೊರೊನಾ ಸೋಂಕಿತರನ್ನು ಚಿಕಿತ್ಸೆಗಾಗಿ ಚಾಮರಾಜನಗರ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.








