ಹಾಸನ ಜಿಲ್ಲೆಯಲ್ಲಿ ಕೊರೊನಾ ಸ್ಫೋಟ | ಇಂದು 547 ಕೇಸ್ ಪತ್ತೆ
ಹಾಸನ : ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಇಂದು ಜಿಲ್ಲೆಯಲ್ಲಿ ಬರೋಬ್ಬರಿ 547 ಕೇಸ್ ಗಳು ಪತ್ತೆಯಾಗಿವೆ.
ನಿನ್ನೆ ಜಿಲ್ಲೆಯಲ್ಲಿ ಮುನ್ನೂರು ಕೊರೊನಾ ಕೇಸ್ ಗಳು ಪತ್ತೆಯಾಗಿದ್ದವು. ಇಂದು 200 ಕೇಸ್ ಗಳು ಹೆಚ್ಚುವರಿಯಾಗಿ ಪತ್ತೆಯಾಗಿವೆ.
ಇಂದಿನ ಕೊರೊನಾ ಸೋಂಕು ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಕೊರೊನಾ ಸೋಂಕಿತರ ಸಂಖ್ಯೆ 1599ಕ್ಕೆ ಬಂದಿದೆ.
ಇಂದು 46 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇತ್ತ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣದಿಂದಾಗಿ ಜಿಲ್ಲಾಡಳಿತ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ.