ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಕೊರೊನಾ ಸ್ಫೋಟ
ಕಲಬುರಗಿ : ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಲ್ಲಿ ಮತ್ತೆ ಕೊರೊನಾ ಸೋಂಕು ಸ್ಫೋಟವಾಗಿದೆ.
ವಿವಿಯಲ್ಲಿ ಸೋಮವಾರವಷ್ಟೇ 18 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.
ಇದೀಗ 16 ವಿದ್ಯಾರ್ಥಿಗಳಿಗೆ ಸೋಂಕು ವಕ್ಕರಿಸಿದೆ. ಇದರಿಂದ ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕ ಮನೆ ಮಾಡಿದೆ.
ಸೋಮವಾರ 18 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇವರ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ.
ಈ ಪೈಕಿ ನಾಲ್ವರು ಸಿಬ್ಬಂದಿ ಮತ್ತು 12 ವಿದ್ಯಾರ್ಥಿಗಳು ಸೇರಿ 16 ಜನರಿಗೆ ಸೋಂಕು ವಕ್ಕರಿಸಿದೆ. ಇನ್ನೂ ಹಲವರ ಪರೀಕ್ಷಾ ವರದಿ ಬರಬೇಕಿದೆ.
ಇನ್ನು ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾದಾಗಿನಿಂದಲೂ ವಿವಿಯಲ್ಲಿ ಒಟ್ಟು 45 ಮಂದಿಗೆ ಕೊರೊನಾ ಸೋಂಕು ವಕ್ಕರಿಸಿದೆ.
ಸದ್ಯ ಇವರನ್ನು ವಿವಿಯಲ್ಲಿರುವ ಹಾಸ್ಟೇಲ್ ನಲ್ಲಿ ಐಸೋಲೇಷನ್ ಮಾಡಲಾಗಿದೆ.