ನವದೆಹಲಿ : ಭಾರತದಲ್ಲಿ ಮತ್ತೆ ಕೊರೊನಾ ಸ್ಫೋಟವಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 83,341 ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 39 ಲಕ್ಷ ಗಡಿದಾಟಿದೆ. ಇದರೊಂದಿಗೆ ಭಾರತ ಅತೀ ಹೆಚ್ಚು ಕೊರೊನಾ ವೈರಸ್ ಪ್ರಕರಣ ದಾಖಲಾದ ದೇಶಗಳ ಪೈಕಿ 2ನೇ ಸ್ಥಾನದಲ್ಲಿರುವ ಬ್ರೆಜಿಲನ್ನು ಹಿಂದಿಕ್ಕುವ ಸನಿಹದಲ್ಲಿದೆ.
ದೇಶದಲ್ಲಿ ನಿನ್ನೆ ಒಂದೇ ದಿನ 83,341 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, 1,096 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 39,36,748ಕ್ಕೆ ಸೋಂಕಿಗೆ ಬಲಿಯಾದವರ ಸಂಖ್ಯೆ 68,472ಕ್ಕೆ ತಲುಪಿದೆ. ಕಳೆದ 4 ದಿನಗಳಿಂದ ನಿರಂತರವಾಗಿ ಸಾವಿರಕ್ಕೂ ಅಧಿಕ ಕೊರೊನಾ ಸಾವುಗಳು ದಾಖಲಾಗುತ್ತಿದ್ದು, ಆತಂಕ ಹೆಚ್ಚಿಸಿದೆ.
ಇನ್ನು ದೇಶದ ಒಟ್ಟು 39,36,748 ಸೋಂಕಿತರ ಪೈಕಿ 30,37,152 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿನ್ನೂ 8,31,124 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








