ಶಾಲೆ-ಕಾಲೇಜುಗಳ ಆರಂಭದ ಬಗ್ಗೆಯೂ ಮಹಿತಿ ಸಂಗ್ರಹ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಬ್ರೇಕ್‍ಫೇಲ್ ಆದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅತಿಹೆಚ್ಚು ಕೊರೊನಾ ಸೋಂಕಿತ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳು ಕೈಗೊಂಡಿರುವ ಕ್ರಮಗಳು, ವ್ಯಾಪಕವಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಹಾಗೂ ಮರಣ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಕಾರಣಗಳು, ಅ.15ರಿಂದ ಶಾಲಾ-ಕಾಲೇಜುಗಳ ಆರಂಭದ ಸಾಧಕ-ಬಾಧಕಗಳ ಬಗ್ಗೆಯೂ ಬಿ.ಎಸ್ ಯಡಿಯೂರಪ್ಪ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ.
ಶಾಲೆ-ಕಾಲೇಜುಗಳ ಆರಂಭದ ಬಗ್ಗೆ ಅ.12ರೊಳಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು. ಹೀಗಾಗಿ ಇಂದಿನ ಮುಖ್ಯಮಂತ್ರಿಗಳ ಸಭೆ ಮಹತ್ವ ಪಡೆದುಕೊಂಡಿದೆ.
11 ಜಿಲ್ಲೆಗಳು ಯಾವುವು..!
ಕೊರೊನೊ ಬ್ರೇಕ್‍ಫೇಲ್ ಆದ ಜಿಲ್ಲೆಗಳಲ್ಲಿ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ನಂತರದ ಸ್ಥಾನ ಸಾಂಸ್ಕøತಿಕ ರಾಜಧಾನಿ ಮೈಸೂರು, ಶಿವಮೊಗ್ಗ, ಬಳ್ಳಾರಿ, ತುಮಕೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಮ್ಮಾರಿ ಕೊರೊನಾ ಅಬ್ಬರ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ತಡೆಗೆ ಕಠಿಣ ನಿಯಮಗಳನ್ನು ಅನುಸರಿಸುವುದು, ಶಾಲಾ-ಕಾಲೇಜುಗಳನ್ನು ಆರಂಭಿಸಿದರೆ ಆಗುವ ಪರಿಣಾಮಗಳ ಬಗ್ಗೆಯೂ ಸಿಎಂ ಬಿಎಸ್‍ವೈ ಅಭಿಪ್ರಾಯ ಕೇಳಲಿದ್ದಾರೆ.