ಬೆಂಗಳೂರು: ಜಗತ್ತಿಗೆ ಮತ್ತೆ ಕೊರೊನಾ ಆತಂಕ ಶುರುವಾಗಿದ್ದು, ಮತ್ತೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಭಾರತ ಸೇರಿದಂತೆ ಅಮೆರಿಕಾ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೊನಾದ ಉಪತಳಿ ಜೆಎನ್.1 ಕಂಡು ಬರುತ್ತಿದೆ. ದೇಶದಲ್ಲಿ ಮೊದಲ ಪ್ರಕರಣ ಕೇರಳದಲ್ಲಿ (Kerala) ಪತ್ತೆಯಾಗಿದೆ. ಜೆಎನ್.1 (JN.1) ಒಮಿಕ್ರಾನ್ ಸಬ್ ವೇರಿಯಂಟ್ ಬಿಎ 2.86 ವಂಶಕ್ಕೆ ಸೇರಿದ್ದಾಗಿದೆ. ಪಿರೋಲಾ ಎಂದು ಕೂಡ ಇದಕ್ಕೆ ಹೆಸರು. ಇದು ಶರವೇಗದಲ್ಲಿ ಹಬ್ಬುತ್ತಿದೆ. ಕೇರಳದ ಕಣ್ಣೂರಿನಲ್ಲಿ 80 ವರ್ಷದ ವೃದ್ಧರೊಬ್ಬರು ಕೋವಿಡ್‌ಗೆ ಬಲಿ ಆಗಿದ್ದಾರೆ. ಕಳೆದ 2 ದಿನಗಳಲ್ಲಿ ಇದು 2ನೇ ಸಾವಾಗಿದೆ.
ಹೀಗಾಗಿ ಎಲ್ಲೆಡೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಸಭೆ-ಸಮಾರಂಭಗಳ ಮೇಲೆಯೂ ಹಲವು ನಿರ್ಬಂಧಗಳನ್ನು ಹೇರಲಾಗುತ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರವೂ ಅಲರ್ಟ್ ಆಗಿದೆ.