ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೊರೊನಾ ವೈರಸ್ ನಿಂದ ಸಂಪೂರ್ಣವಾಗಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ನಡುವೆ ಅವರು ಟ್ವೀಟ್ ಮಾಡಿದ್ದು, ಕೊರೊನಾ ಗೆಲ್ಲಬಹುದು, ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ ಎಂದಿದ್ದಾರೆ.
ಯಡಿಯೂರಪ್ಪ ಟ್ವೀಟ್ ನಲ್ಲಿ “ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದೇನೆ. ನಿಮ್ಮೆಲ್ಲರ ಶುಭಹಾರೈಕೆಗಳಿಂದ ಗುಣಮುಖನಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ. ಆತ್ಮವಿಶ್ವಾಸ, ವೈದ್ಯಕೀಯ ಚಿಕಿತ್ಸೆಗಳಿಂದ ಕೊರೊನಾ ಗೆಲ್ಲಬಹುದು. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ” ಎಂದು ರಾಜ್ಯದ ಜನರಿಗೆ ಕರೆ ನೀಡಿದ್ದಾರೆ.
ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದೇನೆ. ನಿಮ್ಮೆಲ್ಲರ ಶುಭಹಾರೈಕೆಗಳಿಂದ ಗುಣಮುಖನಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ. ಆತ್ಮವಿಶ್ವಾಸ, ವೈದ್ಯಕೀಯ ಚಿಕಿತ್ಸೆಗಳಿಂದ ಕೊರೋನಾ ಗೆಲ್ಲಬಹುದು. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ.
— B.S.Yediyurappa (@BSYBJP) August 10, 2020
ಆಗಸ್ಟ್ 2ರಂದು ಬಿ.ಎಸ್ ಯಡಿಯೂರಪ್ಪಗೆ ಕೋವಿಡ್ ಸೋಂಕು ಇರುವುದು ಖಚಿತವಾಗಿತ್ತು. ಸೋಂಕಿನ ಯಾವುದೇ ಲಕ್ಷಣಗಳು ಇಲ್ಲವಾದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದರು. 9 ದಿನಗಳ ಕಾಲ ಚಿಕಿತ್ಸೆ ಪಡೆದು ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.








