ಹಾಸನದಲ್ಲಿ ಇಂದು 300ರ ಗಡಿದಾಟಿದ ಕೊರೊನಾ ಕೇಸ್
ಹಾಸನ : ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಇಂದು ಕೊರೊನಾ ಸೋಂಕಿತರ ಸಂಖ್ಯೆ ತ್ರಿಶತಕ ಬಾರಿಸಿದೆ.
ಇವತ್ತು ಜಿಲ್ಲೆಯಲ್ಲಿ ಹೊಸದಾಗಿ 351 ಕೇಸ್ ಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಕೇಸ್ ಸಂಖ್ಯೆ 1098ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ಜಿಲ್ಲೆಯಲ್ಲಿ 21 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಏಳು ದಿನದಲ್ಲಿ 1630 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಕಳೆದ ಏಳು ದಿನಗಳಲ್ಲಿ ಶೇ.5.45 ಪಾಸಿಟಿವಿಟಿ ದರ ಇದೆ. ಕೊರೊನ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಹಾಸನ ಜಿಲ್ಲೆ ರಾಜ್ಯದಲ್ಲಿ 8 ಸ್ಥಾನದಲ್ಲಿದೆ.