ಕೊಪ್ಪಳ: ಕೊಪ್ಪಳದಲ್ಲಿ ಇಂದು ಕೊರೊನಾ ಸ್ಫೋಟವಾಗಿದ್ದು ಒಂದೇ ದಿನ 98 ಹೊಸ ಕೊರೊನಾ ಪಾಸಿಟಿವ್ ಕೇಸ್ ಗಳು ಧೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1194ರ ಗಡಿ ತಲುಪಿದೆ. ಹೊಸ ಪಾಸಿಟಿವ್ ಕೇಸ್ ಗಳ ಪೈಕಿ ಗಂಗಾವತಿ ತಾಲೂಕಿನಲ್ಲಿ 53, ಕುಷ್ಟಗಿಯಲ್ಲಿ 17, ಕೊಪ್ಪಳ ತಾಲೂಕಿನಲ್ಲಿ 27 , ಯಲಬುರ್ಗಿಯಲ್ಲಿ 1 ಪ್ರಕರಣ ಪತ್ತೆಯಾಗಿದೆ. ಇನ್ನೂ ಇಂದು ಇಬ್ಬರು ಮೃತಪಟ್ಟಿದ್ದು, ಈವರೆಗೂ ಮಹಾಮಾರಿಗೆ ಜಿಲ್ಲೆಯಲ್ಲಿ ಒಟ್ಟು 26 ಜನರು ಬಲಿಯಾಗಿದ್ದಾರೆ. ಇಂದು ಒಟ್ಟು ಜಿಲ್ಲೆಯಲ್ಲಿ 68 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೂ ಗುಣಮುಖರಾದವರ ಸಂಖ್ಯೆ 757ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಮಾಹಿತಿ ನಿಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಜಿಲ್ಲೆಯಲ್ಲಿ ಈವರೆಗೂ ಒಟ್ಟು 24,960 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ ಜನರ ವರದಿ ಬಂದಿದೆ. ಇನ್ನುಳಿದಂತೆ 958 ಜನರ ಲ್ಯಾಬ್ ವರದಿ ಬರಬೇಕಾಗಿದೆ ಎಂದು ಡಿಸಿ ತಿಳಿಸಿದ್ದಾರೆ.
astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...








