Covid Update – ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 99,602ಕ್ಕೆ ಏರಿಕೆ…
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಜನರಲ್ಲಿ ನಾಲ್ಕನೇ ಅಲೆಯ ಆತಂಕಕ್ಕೆ ಕಾರಣವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ 14,506 ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ, ನಿನ್ನೆಗಿಂತ ಶೇಕಡಾ 25 ರಷ್ಟು ಹೆಚ್ಚಾಗಿದೆ. ಕೋವಿಡ್ ನಿಂದಾಗಿ 30 ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ನಿನ್ನೆ ವರದಿಯಾದ ಅಂಕಿ ಅಂಶದಲ್ಲಿ 11,793 ಪ್ರಕರಣಗಳು ಪತ್ತೆಯಾಗಿದ್ದವು ಮತ್ತು 27 ರೋಗಿಗಳು ಸಾವನ್ನಪ್ಪಿದ್ದರು. ಕಳೆದ 24 ಗಂಟೆಗಳಲ್ಲಿ 11,574 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಸಕ್ರಿಯ ರೋಗಿಗಳ ಸಂಖ್ಯೆ 99,602 ತಲುಪಿದೆ. 1 ಲಕ್ಷದ ಹತ್ತಿರ ಬಂದು ನಿಂತಿದೆ. ಕೋವಿಡ್ ಮೊದಲನೇ ಅಲೆಯಿಂದ ಇಲ್ಲಿಯವರೆಗೂ 52,50,77 ಮಂದಿ ಸಾವನ್ನಪ್ಪಿದ್ದಾರೆ.
ಕೇರಳದಲ್ಲಿ ಮಾಸ್ಕ್ ಕಡ್ಡಾಯ
ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಮಂಗಳವಾರ, ಕೇರಳ ಪೊಲೀಸರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿರುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.