ದೇಶದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ ಕೇಸ್ ಗಳು Corona saaksha tv
ನವದೆಹಲಿ : ಭಾರತದಲ್ಲಿ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 45,352 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇದೇ ಅವಧಿಯಲ್ಲಿ ದೇಶದಾದ್ಯಂತ 366 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಾದ್ಯಂತ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,39,895 ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ 34,791 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,20,63,616 ಕ್ಕೆ ಏರಿದೆ.
ಚೇತರಿಕೆ ದರ 97.45% ಇದೆ. ದೇಶದಲ್ಲಿ ಸದ್ಯ 3,99,778 ಸಕ್ರಿಯ ಕೇಸ್ ಗಳಿವೆ.









