ದೇಶದಲ್ಲಿ ಏರಿಕೆಯಾದ ಕೊರೊನಾ ಪ್ರಕರಣಗಳು
ನವದೆಹಲಿ: ದೇಶದಲ್ಲಿ ಕೊರೊನಾ ಮಹಾಮಾರಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಕಳೆದ 24 ಘಂಟೆಯಲ್ಲಿ 1,94,720 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 442 ಜನ ಸಾವನ್ನಪ್ಪಿದ್ದಾರೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಒಟ್ಟಾರೆಯಾಗಿ ದೇಶದಲ್ಲಿ 3, 60, 70, 510 ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 9,55,319 ಸಕ್ರೀಯ ಪ್ರಕರಣಗಳಿವೆ. ಈ ಮೂಲಕ ಕೊರೊನಾ 11.05 ಪ್ರತಿಶತದಷ್ಟು ಏರಿಕೆಯಾಗಿದೆ. ಸಕ್ರೀಯ ಪ್ರಕರಣಗಳು 2.65 ಪ್ರತಿಶತದಷ್ಟು ಏರಿಕೆಯಾಗಿದೆ.