ಧಾರವಿ ಎರಡು ಸಾವಿರ ದಾಟಿದ ಕೊರೊನಾ ಪ್ರಕರಣಗಳು
ಮುಂಬೈ, ಜೂನ್ 16: ಏಷ್ಯಾದ ಹೆಚ್ಚು ಜನಸಂಖ್ಯೆ ಹೊಂದಿರುವ ಕೊಳೆಗೇರಿ ಪ್ರದೇಶವಾದ ಮುಂಬೈನ ಧಾರವಿಯಲ್ಲಿ ಸೋಮವಾರ 25 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಧಾರವಿಯಲ್ಲಿ ದಾಖಲಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 2068 ಕ್ಕೆ ಏರಿದೆ ಎಂದು ಮೂಲಗಳು ಮಾಹಿತಿ ನೀಡಿದೆ.

ಮುಂಬೈನ ಧಾರಾವಿ ಕೊಳೆಗೇರಿ ಪ್ರದೇಶದಲ್ಲಿ ಕೊರೊನಾ ಸೋಂಕು ರುದ್ರ ತಾಂಡವವಾಡುತ್ತಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 25 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಜನನಿಬಿಡ ಕೊಳೆಗೇರಿ ಕಾಲೋನಿಯಾಗಿರುವ ಧಾರವಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ವೇಗವಾಗಿ ಏರಿಕೆ ಕಾಣುತ್ತಿರುವುದು ಆತಂಕ ಸೃಷ್ಟಿಸಿದೆ.
ಮುಂಬೈನ ಧಾರವಿ ಪ್ರದೇಶದಲ್ಲಿ ಸೋಮವಾರ 25 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿರುವ ಹಿನ್ನಲೆಯಲ್ಲಿ ಈ ಪ್ರದೇಶದಲ್ಲಿ ಒಟ್ಟು ಸಕಾರಾತ್ಮಕ ಪ್ರಕರಣಗಳ ಸಂಖ್ಯೆ 2,068 ಕ್ಕೆ ಏರಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಹೇಳಿದೆ. ಧಾರವಿಯಲ್ಲಿ ಕೊರೊನಾದಿಂದ ಒಟ್ಟು 77 ಮಂದಿ ಸಾವನ್ನಪ್ಪಿದ್ದಾರೆ.
ಮುಂಬೈನ ಧಾರವಿಯಲ್ಲಿ ಮೊದಲ ಕೊರೊನಾ ಪ್ರಕರಣ ಏಪ್ರಿಲ್ ತಿಂಗಳ ಆರಂಭದಲ್ಲಿ ವರದಿಯಾದಾಗ ಈ ಪ್ರದೇಶ ದೇಶದಲ್ಲಿಯೇ ಕೊರೊನಾ ಹಾಟ್ ಸ್ಪಾಟ್ ಆಗಿ ಪರಿಣಮಿಸಬಹುದು ಎಂದು ತಜ್ಞರು ಎಚ್ಚರಿಸಿದ್ದರು .

ತಜ್ಞರ ಎಚ್ಚರಿಕೆಯಂತೆ ಕೆಲವೇ ದಿನಗಳಲ್ಲಿ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗಿ ಕೊರೊನಾ ಹಾಟ್ಸ್ಪಾಟ್ ಆಗಿ ಮಾರ್ಪಟ್ಟಿತು. ಇಂದು ಭಾರತದ ಅತ್ಯಂತ ಹೆಚ್ಚು ಕೊರೊನಾ ಪೀಡಿತ ಪ್ರದೇಶಗಳಲ್ಲಿ ಧಾರವಿ ಕೂಡ ಒಂದು.








