ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಒಂದು ಕಡೆ ವರುಣನ ಆರ್ಭಟವಿದ್ದರೆ ಮತ್ತೊಂದೆಡೆ ಜಿಲ್ಲೆಯಲ್ಲಿ ಕೊರೊನಾ ಹಾವಳಿ ದಿನೇ ದಿನೇ ಅಬ್ಬರ ಮುಂದುವರೆಸಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಹೊಸದಾಗಿ ಒಟ್ಟು 94 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 2511 ಕ್ಕೇರಿಕೆಯಾಗಿದೆ. ಈ ಪೈಕಿ 860 ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಒಟ್ಟು 50 ಜನರು ಸೋಂಕಿನ ವಿರುದ್ಧದ ಹೋರಾಟದಲ್ಲಿ ಗೆದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾಗೆ ಒಟ್ಟು ಈವರೆಗೂ ಒಟ್ಟು 50 ಜನರು ಮೃತಪಟ್ಟಿದ್ದಾರೆ.









