ಬೆಳ್ತಂಗಡಿಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗೆ ಕೊರೊನಾ ದೃಢ
ಬೆಳ್ತಂಗಡಿ: ನಗರದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ. ಸೋಂಕು ದೃಢಪಟ್ಟ ವೈದ್ಯೆಯ ಪತಿ ಕೂಡ ವೈದ್ಯರಾಗಿದ್ದು, ಈಗಾಗಲೇ ಕ್ವಾರಂಟೈನ್ ನಲ್ಲಿ ಇದ್ದಾರೆ.
ಸದ್ಯ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಬಾಣಂತಿಯರು ಹಾಗೂ ಕೊರೊನಾ ಸೋಂಕಿತರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಹಾಗೂ ನಾಲ್ವರು ದಾದಿಯರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದೀಗ ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬರಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಇದೀಗ ಎಲ್ಲಾ ಸೋಂಕಿತರನ್ನು ಚಿಕಿತ್ಸೆಗಾಗಿ ಉಜಿರೆ ಟಿ.ವಿ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ.








