ರಾಮನಗರ: ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ಬಾಷ್ ಕಂಪನಿಗೆ ಮಹಾಮಾರಿ ಕೊರೊನಾ ಅಪ್ಪಳಿಸಿದೆ.
ಬಾಷ್ ಕಂಪನಿಯಲ್ಲಿದ್ದ 62 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ನಿತ್ಯ ಕಂಪನಿಯಲ್ಲಿ 3,200 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಪೈಕಿ 762 ಜನರಿಗೆ ಈವರೆಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. 182 ಕಾರ್ಮಿಕರು ಪ್ರಾಥಮಿಕ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.
62 ಜನರ ಜೊತೆಗೆ ಮತ್ತಷ್ಟು ಉದ್ಯೋಗಿಗಳಿಗೆ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಸೋಂಕಿತರು ಬೆಂಗಳೂರಿನ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದಾರೆ. ಕಂಪನಿ ಸಿಬ್ಬಂದಿಗೆ ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಕೆಲಸಕ್ಕೆ ರಜೆ ನೀಡದೇ ದಿನಕ್ಕೆ 3 ಶಿಫ್ಟ್ ನಂತೆ ಕೆಲಸ ಮಾಡಿಸಲಾಗ್ತಿದೆ. ಆತಂಕದಲ್ಲೇ ಕೆಲಸ ಮಾಡುತ್ತಿದ್ದೇವೆ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.
ಕೆಲ ದಿನಗಳ ಟೊಯೋಟಾ ಕಂಪನಿಯಲ್ಲೂ ಕೊರೋನಾ ಕಾಣಿಸಿಕೊಂಡಿತ್ತು. ಕಾರ್ಖಾನೆಯ 9 ಜನರು ಸೋಂಕಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಚಿಕಿತ್ಸೆಗೆ ಒಳಗಾಗಿದ್ದಾರೆ.
ಕಾರ್ಮಿಕರಲ್ಲಿ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಟೊಯೋಟಾ ಕಂಪನಿಯನ್ನು ಎರಡು ದಿನಗಳ ಕಾಲ ಲಾಕ್ ಡೌನ್ ಮಾಡಿ ನಂತರ ಮೂರು ಶಿಫ್ಟ್ ಇದ್ದಿದ್ದನ್ನು ಒಂದು ಶಿಫ್ಟ್ ಗೆ ಕಡಿತ ಮಾಡಿ ಕೆಲಸ ಪ್ರಾರಂಭಿಸಲಾಗಿದೆ. ಅಲ್ಲಿಯೂ 12 ಸಾವಿರಕ್ಕೂ ಹೆಚ್ಚು ಜನ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಾರೆ. ಕಂಪನಿಯಲ್ಲಿ ಅಗತ್ಯ ಕ್ರಮಗಳನ್ನು ಅನುಸರಿಸಿ ಕೆಲಸ ಮುಂದುವರೆಸಲಾಗುತ್ತದೆ. ಕಂಪನಿಯನ್ನು ಲಾಕ್ ಡೌನ್ ಮಾಡಲು ಸರ್ಕಾರದ ಆದೇಶ ಇಲ್ಲ ಎಂದು ರಾಮನಗರ ಜಿಲ್ಲಾಧಿಕಾರಿ ಅರ್ಚನಾ ತಿಳಿಸಿದ್ದಾರೆ.
ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ
ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...








